ಕೊಲೊಸ್ಸೆಯವರಿಗೆ 2:16 - ಪರಿಶುದ್ದ ಬೈಬಲ್16 ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಶೆ ರಾತಾನಾ, ಖಾತಲ್ಯಾ ಅನಿ ಫಿತಲ್ಯಾ ವಿಶಯಾತ್, ನಾತರ್ ತೆಂಚ್ಯಾ ಪದ್ದತಿಯಾಂಚಿ ಸನಾ, ಆಂವ್ಸೆಚೆ ಕಾರೆವ್, ಸಬ್ಬತಾಚಿ ದಿಸಾ, ಹ್ಯಾ ನಿಯಮಾ ಘೆವ್ನ್ ಕೊನ್ಬಿ ಝಡ್ತಿ ಕರುಚ್ ನ್ಹಯ್. ಅಧ್ಯಾಯವನ್ನು ನೋಡಿ |
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”
ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.
ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!
“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.