Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:4 - ಪರಿಶುದ್ದ ಬೈಬಲ್‌

4 ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯಾರೂ ತಮ್ಮ ಕುತರ್ಕಗಳಿಂದ ನಿಮ್ಮನ್ನು ಮೋಸಗೊಳಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂಬ ಭಯ ನನಗಿರುವದರಿಂದ ಇದನ್ನು ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರೂ ತಮ್ಮ ತರ್ಕದ ನಯಮಾತುಗಳಿಂದ ನಿಮ್ಮನ್ನು ವಂಚಿಸಬಾರದೆಂದು ನಾನು ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕೊನ್‍ಬಿ ತುಮ್ಕಾ ಸಮಾ ದಿಸ್ತಲ್ಯಾ ಝುಟ್ಯಾ ಬೊಲ್ನ್ಯಾನಿ ಪಸ್ವುನಸಿ ಸಾರ್ಕೆ ಹಿ ಸಂಗ್ತಿಯಾ ತುಮ್ಕಾ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:4
28 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ.


ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.


ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ.


ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.


ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.


ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು