Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:8 - ಪರಿಶುದ್ದ ಬೈಬಲ್‌

8 ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮ್ಕಾ ಕೊನ್‍ತರಬಿ ಪಸ್ವುನ್ ಫಾಯ್ದ್ಯಾಕ್ ನಸಲ್ಲ್ಯಾ ತತ್ವಜ್ಞಾನಾಂಚ್ಯಾ ಶಿಕಾಪಾಚ್ಯಾ ವಾಟೆಕ್ ಚಲ್ವಿನಸಿ ಸಾರ್ಕೆ ಉಶಾರ್ಕಿನ್ ರ್‍ಹಾವಾ. ತಿ ಹ್ಯಾ ಜಗಾತ್ಲಿ ಫಾಯ್ದ್ಯಾಕ್ ಪಡಿನಸಲ್ಲಿ ಶಿಕಾಪಾ, ಮಾನ್ಸಾಂಚ್ಯಾಕ್ನಾ ಯೆಲ್ಲಿ; ಕ್ರಿಸ್ತಾಕ್ನಾ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:8
38 ತಿಳಿವುಗಳ ಹೋಲಿಕೆ  

ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?


ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಈ ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ಈ ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ:


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ.


ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.


ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.


ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.


ಅದೇ ರೀತಿಯಲ್ಲಿ ನಾವು ಮೊದಲು ಮಕ್ಕಳಂತಿದ್ದೆವು. ಈ ಪ್ರಪಂಚದ ಉಪಯೋಗವಿಲ್ಲದ ನಿಯಮಗಳಿಗೆ ನಾವು ಗುಲಾಮರಾಗಿದ್ದೆವು.


ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.


ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.


ಆದರೆ ಕ್ರಿಸ್ತನಿಂದ ನೀವು ಕಲಿತುಕೊಂಡದ್ದು ಅವುಗಳನ್ನಲ್ಲ.


ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.


ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.


“ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?


ಯೇಸು ಶಿಷ್ಯರಿಗೆ, “ಎಚ್ಚರಿಕೆಯಿಂದಿರಿ! ಫರಿಸಾಯರ ಮತ್ತು ಸದ್ದುಕಾಯರ ಹುಳಿಗೆ ಒಳಗಾಗಬೇಡಿ” ಎಂದು ಹೇಳಿದನು.


ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಪ್ರಾಪಂಚಿಕ ವಿಷಯಗಳ ಕುರಿತಾದ ಈ ನಿಯಮಗಳೆಲ್ಲ ಬಳಸಿದ ಮೇಲೆ ನಾಶವಾಗುತ್ತವೆ. ಅವುಗಳು ಜನರ ಆಜ್ಞೆ ಮತ್ತು ಜನರ ಉಪದೇಶಗಳೇ ಹೊರತು ದೇವರವಲ್ಲ.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.


ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.


ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ! ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ.


ಆದರೆ ನಿಮ್ಮ ಸ್ವತಂತ್ರದ ಬಗ್ಗೆ ಎಚ್ಚರಿಕೆಯಿಂದಿರಿ. ನಂಬಿಕೆಯಲ್ಲಿ ಬಲಹೀನರಾಗಿರುವ ಜನರನ್ನು ನಿಮ್ಮ ಸ್ವಾತಂತ್ರ್ಯವು ಪಾಪಕ್ಕೆ ಬೀಳಿಸುವ ಸಾಧ್ಯತೆಯಿದೆ.


ಆದ್ದರಿಂದ ತಾನು ದೃಢವಾಗಿ ನಿಂತಿದ್ದೇನೆ ಎಂದು ಯೋಚಿಸುವ ವ್ಯಕ್ತಿಯು ಬೀಳದಂತೆ ಎಚ್ಚರಿಕೆಯಿಂದಿರಬೇಕು.


ನೀವು ಒಬ್ಬರನ್ನೊಬ್ಬರು ಕಚ್ಚಿ ಹರಿದುಹಾಕಿ ನುಂಗುವುದಾದರೆ ಒಬ್ಬರಿಂದೊಬ್ಬರು ನಾಶವಾಗುತ್ತೀರಿ. ಆದ್ದರಿಂದ ಎಚ್ಚರಿಕೆಯಿಂದಿರಿ!


ಈ ನಿಯಮಗಳು ನೋಡುವುದಕ್ಕೆ ಬದ್ಧಿಯುಳ್ಳವಾಗಿವೆ. ಆದರೆ ಅತಿವಿನಯವಂತರಂತೆ ನಟಿಸಲು ಮತ್ತು ತಮ್ಮ ದೇಹಗಳನ್ನು ದಂಡಿಸಲು ಜನರನ್ನು ಪ್ರೆರೇಪಿಸುವ ಅವುಗಳು ಕೇವಲ ಮಾನವ ನಿರ್ಮಿತವಾದ ಧರ್ಮದ ಒಂದು ಭಾಗವಾಗಿವೆ. ಆದರೆ ಪಾಪಸ್ವಭಾವವು ಇಚ್ಛಿಸುವ ದುಷ್ಕೃತ್ಯಗಳನ್ನು ಮಾಡದಂತೆ ಅವು ಜನರಿಗೆ ಯಾವ ಸಹಾಯವನ್ನೂ ಮಾಡುವುದಿಲ್ಲ.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು