ಕೊಲೊಸ್ಸೆಯವರಿಗೆ 3:11 - ಪರಿಶುದ್ದ ಬೈಬಲ್11 ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹ್ಯಾ ನ್ಹವ್ಯಾ ಜಿವನಾತ್ ಗ್ರಿಕ್ ಅನಿ ಜುದೆವಾಂಚ್ಯಾ ಮದ್ದಿ, ನಾತರ್ ಸುನ್ನತ್ ಕರುನ್ ಘೆಟಲ್ಲ್ಯಾಚ್ಯಾ ಅನಿ ಕರುನ್ ಘೆವ್ಕ್ ನಸಲ್ಲ್ಯಾಚ್ಯಾ ಮದ್ದಿ ಹೊಂವ್ದಿತ್, ನಾತರ್ ವಳಕ್ ನತ್ತೊ ಅನಿ ವಳಕ್ ಹೊತ್ತೊ, ಸ್ವತಂತ್ರ್ ಅನಿ ಗುಲಾಮ್, ಹೆಂಚ್ಯಾ ಮದ್ದಿ ಹೊಂವ್ದಿತ್ ಕಸ್ಲೊಬಿ ಭೆದ್ ಭಾವ್ ನಾ, ಕ್ರಿಸ್ತುಚ್ ಸಗ್ಳೆ ಅನಿ ಸಗ್ಳ್ಯಾಕ್ಡೆ ರ್‍ಹಾತಲೊಬಿ ತೊಚ್. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.