ಕೊಲೊಸ್ಸೆಯವರಿಗೆ 3:15 - ಪರಿಶುದ್ದ ಬೈಬಲ್15 ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಕ್ರಿಸ್ತ್ ದಿತಲೆ ಶಾಂತ್ಪಾನ್, ತುಮ್ಚ್ಯಾ ಚಿಂತ್ಪಾಕ್ನಿ ಹತೊಟಿತ್ ಥವ್ನ್ ಘೆಂವ್ದಿತ್, ತುಮಿ ಸಗ್ಳೆ ಎಕುಚ್ ಆಂಗಾಕ್ ಮಿಳಲ್ಲೆ ಹೊಲ್ಲ್ಯಾಸಾಟ್ನಿ, ಶಾಂತ್ಪಾನಾನ್ ರ್‍ಹಾವ್ಕ್ ಬಲ್ವುನ್ ಹೊಲ್ಯಾಸಿ, ಸದಾ ಸರ್ವತಾಕ್ ಧನ್ಯಾವಾದ್ ದಿತಲೆ ಹೊವ್ನ್ ರ್‍ಹಾವಾ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.