ಕೊಲೊಸ್ಸೆಯವರಿಗೆ 3:22 - ಪರಿಶುದ್ದ ಬೈಬಲ್22 ಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದಾಸತ್ವದಲ್ಲಿರುವವರೇ, ಈ ಲೋಕದಲ್ಲಿನ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ; ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ಕರ್ತನಿಗೆ ಭಯಪಡುವವರಾಗಿ ಸರಳಮನಸ್ಸಿನಿಂದ ಕೆಲಸಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಸೆವಕಾನು, ಸಗ್ಳ್ಯಾ ಕಾಮಾತ್ನಿ ಹ್ಯಾ ಜಗಾಚ್ಯಾ ತುಮ್ಚ್ಯಾ ಯಜಮಾನಾಕ್ನಿ ಖಾಲ್ತಿ ಹೊವ್ನ್ ಚಲಾ, ತೆಂಕಾ ಬರೆ ದಿಸುಕ್ ತೆಂಚ್ಯಾ ಇದ್ರಾಕ್ ಯೆವ್ಡೆಚ್ ಕಾಮ್ ಕರ್‍ತಲೆ ಹೊವ್ನ್ ರ್‍ಹಾವ್ನಕಾಶಿ. ಫುರಾ ಮನಾನ್ ಸೆವಾ ಕರಾ. ಅಧ್ಯಾಯವನ್ನು ನೋಡಿ |
ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.