ಕೊಲೊಸ್ಸೆಯವರಿಗೆ 3:5 - ಪರಿಶುದ್ದ ಬೈಬಲ್5 ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತಸೆ ಹೊವ್ನ್, ತುಮ್ಚ್ಯಾಕ್ಡೆ ಹೊತ್ತಿ ಬುರ್ಶಿ ಕಾಮಾ, ಲೈಂಗಿಕ್ ಪಾಪ್, ಬುರ್ಶಿ ಕಾಮಾ, ಸಂಬೊಗ್ ಕರ್ತಲಿ ಆಶಾ, ಬುರ್ಶಿ ಆಶಾ, ಮುರ್ತಿಯಾಂಚ್ಯಾ ಫುಜೆಕ್ ಸಮಾ ಹೊವ್ನ್ ಹೊತ್ತ್ಯಾ ಬುರ್ಶಾ ಆಶೆಕ್ ಮರುನ್ ಸೊಡಾ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.