ಕೊಲೊಸ್ಸೆಯವರಿಗೆ 4:1 - ಪರಿಶುದ್ದ ಬೈಬಲ್1 ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಯಜಮಾನಾನು, ತುಮ್ಚ್ಯಾ ಸೆವಕಾಕ್ನಿ ಬರೆ ಅನಿ ಸಮಾ ಹೊತ್ತೆಚ್ ಕರಾ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾತ್ ತುಮ್ಕಾಬಿ ಎಕ್ ಯಜಮಾನ್ ಹಾಯ್ ಮನ್ತಲೆ ಯಾದ್ ಥವಾ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.