ಕೊಲೊಸ್ಸೆಯವರಿಗೆ 4:8 - ಪರಿಶುದ್ದ ಬೈಬಲ್8 ಆದಕಾರಣವೇ ನಾನು ಅವನನ್ನು ಕಳುಹಿಸುತ್ತಿದ್ದೇನೆ. ನಾವು ಹೇಗಿರುವೆವು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮನ್ನು ಪ್ರೋತ್ಸಾಹಿಸಲು ನಾನು ಅವನನ್ನು ಒನೇಸಿಮನ ಜೊತೆಯಲ್ಲಿ ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ವಿಷಯದಲ್ಲಿ ನಿಮಗೆ ಎಲ್ಲವನ್ನೂ ತಿಳಿಸಿ, ನಿಮ್ಮನ್ನು ಹುರಿದುಂಬಿಸಿ, ಪ್ರೋತ್ಸಾಹಿಸುವುದಕ್ಕಾಗಿ ಆತನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ನನ್ನ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ನಮ್ಮ ಪರಿಸ್ಥಿತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತ್ಯಾ ಕಾರನಾಸಾಟ್ನಿಚ್ ಮಿಯಾ ತೆಕಾ ಧಾಡುನ್ ದಿವ್ಕ್ ಲಾಗ್ಲಾ, ಅಮಿ ಕಶೆ ಹಾಂವ್ ಮನುನ್, ತುಮ್ಕಾಬಿ ಕಳುಚೆ ಮನ್ತಲಿ ಮಾಜಿ ಆಶಾ, ತುಮ್ಕಾ ಉಮ್ಮೆದ್ ಭರುಕ್ ಮನುನ್ ಮಿಯಾ ತೆಕಾ ಓನೆಜಿಮಸ್ ಮನ್ತಲ್ಯಾಚ್ಯಾ ವಾಂಗ್ಡಾ ಧಾಡುನ್ ದಿವ್ಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.
ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.