ಗಲಾತ್ಯದವರಿಗೆ 1:10 - ಪರಿಶುದ್ದ ಬೈಬಲ್10 ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತಸೆ ಜಾಲ್ಯಾರ್ ಅತ್ತಾ, ಕೊನಾಕ್ ಮಿಯಾ ಹೆ ಬರೆ ದಿಸಿ ಸಾರ್ಕೆ ಕರುಕ್ ಲಾಗ್ಲಾ ಮನುನ್ ತುಮ್ಕಾ ದಿಸ್ತಾ ಮಾನ್ಸಾಕ್ ಕಾಯ್ ದೆವಾಕ್? ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಮನುನ್ ತುಮಿ ಚಿಂತಲ್ಲ್ಯಾಸಿ ಕಾಯ್? ಅನಿಬಿ ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಹೊಲ್ಯಾರ್ ಮಿಯಾ ಕ್ರಿಸ್ತಾಚೊ ಸೆವಕ್ ನ್ಹಯ್. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.