ಗಲಾತ್ಯದವರಿಗೆ 1:13 - ಪರಿಶುದ್ದ ಬೈಬಲ್13 ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಿಯಾ ಅದ್ದಿ ಜುದೆವಾಂಚೊ ಹೊವ್ನ್ ಹೊತ್ತ್ಯಾ ತನ್ನಾ, ಮಾಜಿ ಚಲ್ನುಕ್ ಕಸ್ಲಿ ಹೊತ್ತಿ ಮನುನ್ ತುಮಿ ಆಯಿಕ್ಲ್ಯಾಶಿ ತವ್ಡೆಚ್, ಮಿಯಾ ದೆವಾಚ್ಯಾ ತಾಂಡ್ಯಾಂಚ್ಯಾ ಲೊಕಾಕ್ನಿ ಲೈ ತರಾಸ್ ದಿವ್ನ್ ನಾಸ್ ಕರುನ್ಗೆತ್ ಹೊತ್ತೊ. ಅಧ್ಯಾಯವನ್ನು ನೋಡಿ |
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.