Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:7 - ಪರಿಶುದ್ದ ಬೈಬಲ್‌

7 ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಅಪೇಕ್ಷಿಸುತ್ತಾ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಮಟ್ಲ್ಯಾರ್ ದುಸ್ರಿ ಬರಿ ಖಬರ್ ನಾ, ಖರೆ ಉಲ್ಲಿ ಲೊಕಾ ತುಮ್ಕಾ ಗೊಂದಳಾತ್ ಘಾಲುಕ್ ಲಾಗ್ಲಾತ್ ಅನಿ ಕ್ರಿಸ್ತಾಚಿ ಬರಿ ಖಬರ್ ಬದ್ಲುಕ್ ಕಟ್ಪಟ್ ಕರುಕ್ ಲಾಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:7
38 ತಿಳಿವುಗಳ ಹೋಲಿಕೆ  

ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!


ಆ ಬೇರೆ ಅಭಿಪ್ರಾಯಗಳನ್ನು ನೀವು ನಂಬುವುದಿಲ್ಲವೆಂದು ಪ್ರಭುವಿನಲ್ಲಿ ನಿಮ್ಮನ್ನು ಕುರಿತು ಭರವಸೆಯಿಂದಿದ್ದೇನೆ. ಯಾರೊ ಒಬ್ಬನು ಆ ಅಭಿಪ್ರಾಯಗಳಿಂದ ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾನೆ. ಅವನು ಯಾರೇ ಆಗಿದ್ದರೂ ದಂಡನೆ ಹೊಂದುವನು.


ಅವರು ನಿಜ ಅಪೊಸ್ತಲರಲ್ಲ. ಅವರು ಮೋಸಗಾರರಾದ ಕೆಲಸಗಾರರು. ತಾವು ಕ್ರಿಸ್ತನ ಅಪೊಸ್ತಲರಲ್ಲದಿದ್ದರೂ ಜನರು ತಮ್ಮನ್ನು ಕ್ರಿಸ್ತನ ಅಪೊಸ್ತಲರೆಂದು ತಿಳಿದುಕೊಳ್ಳುವಂತೆ ನಟಿಸುತ್ತಾರೆ.


ನಿಮ್ಮನ್ನು ಕಳವಳಪಡಿಸುತ್ತಿರುವವರು ತಮಗಾಗಿರುವ ಸುನ್ನತಿಯಲ್ಲದೆ ತಮ್ಮ ಅಂಗವನ್ನೇ ಕತ್ತರಿಸಿಕೊಂಡರೆ ಒಳ್ಳೆಯದು.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.


ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.


ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.


ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.


ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.


ಆದ್ದರಿಂದ ಇನ್ನು ಮೇಲೆ ನನಗೆ ತೊಂದರೆ ಕೊಡಬೇಡಿ. ನನ್ನ ದೇಹದ ಮೇಲೆ ಬಾಸುಂಡೆಯ ಗುರುತುಗಳಿವೆ. ನಾನು ಕ್ರಿಸ್ತನವನೆಂಬುದಕ್ಕೆ ಈ ಗುರುತುಗಳೇ ಸಾಕ್ಷಿ.


ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.


ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ.


ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.


ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು