ಗಲಾತ್ಯದವರಿಗೆ 1:9 - ಪರಿಶುದ್ದ ಬೈಬಲ್9 ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿದ್ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅತ್ತಾ ಸಾಂಗಲ್ಲ್ಯಾ ಸಾರ್ಕೆ ಅನಿಪರ್ತುನ್ ಮಿಯಾ ತುಮ್ಕಾ ಸಾಂಗ್ತಾ: ತುಮಿ ಮಾನುನ್ ಘೆಟಲ್ಲಿ ಬರಿ ಖಬರ್ ಸೊಡುನ್, ಕೊನ್‍ಬಿ ಅನಿಎಕ್ ದುಸ್ರಿ ಖಬರ್ ಸಾಂಗ್ತಾ ಹೊಲ್ಯಾರ್, ತೆಂಚ್ಯಾ ವರ್‍ತಿ ಸರಾಪ್ ಪಡುಂದಿತ್. ಅಧ್ಯಾಯವನ್ನು ನೋಡಿ |