Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:11 - ಪರಿಶುದ್ದ ಬೈಬಲ್‌

11 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಪೆದ್ರು ಅಂತಿಯೊಕಾತ್ ಯೆಲ್ಲ್ಯಾ ತನ್ನಾ, ಮಿಯಾ ತೆಚ್ಯಾ ಇದ್ರಾಕುಚ್ ವಿರೊಧ್ ರ್‍ಹಾಲೊ. ಕಶ್ಯಾಕ್ ಮಟ್ಲ್ಯಾರ್ ತೊ ಸಮಾ ನ್ಹಯ್ ಹೊತ್ತೆ ಕರುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:11
31 ತಿಳಿವುಗಳ ಹೋಲಿಕೆ  

ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು.


ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.


ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ಈ ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು.


ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು.


ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.


ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.


ಆ “ಮಹಾ ಅಪೊಸ್ತಲರು” ನನಗಿಂತ ಮಿಗಿಲಾದವರೆಂದು ನಾನು ಭಾವಿಸುವುದಿಲ್ಲ.


ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.


ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ಆದರೆ ಯೆಹೋವನು ಮೋಶೆ ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರೇಲರ ಎದುರಿನಲ್ಲಿ ನನ್ನ ಪವಿತ್ರತೆಯನ್ನು ತೋರಿಸದೆ ಹೋದದ್ದರಿಂದ ಈ ಸಮುದಾಯದವರಿಗೆ ಕೊಡಲಿರುವ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗುವುದಿಲ್ಲ.” ಎಂದು ಹೇಳಿದನು.


ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).


ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.


ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.


ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.


ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು