ಗಲಾತ್ಯದವರಿಗೆ 2:16 - ಪರಿಶುದ್ದ ಬೈಬಲ್16 ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.