ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
ನನ್ನ ಸಹೋದರ ಸಹೋದರಿಯರೇ, ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನು ಬೋಧಿಸುವುದಿಲ್ಲ. ಸುನ್ನತಿಯ ಅಗತ್ಯತೆಯನ್ನು ಕುರಿತು ಉಪದೇಶಿಸುವವನಾಗಿದ್ದರೆ, ನಾನಿನ್ನೂ ಹಿಂಸೆಗೆ ಒಳಗಾಗಿರುವುದೇಕೆ? ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನಿನ್ನೂ ಉಪದೇಶಿಸುವುದಾಗಿದ್ದರೆ, ಶಿಲುಬೆಯ ವಿಷಯವಾದ ನನ್ನ ಬೋಧನೆಗೆ ಅಡ್ಡಿಯಾಗುವುದೇ ಇಲ್ಲ.
ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)