Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:20 - ಪರಿಶುದ್ದ ಬೈಬಲ್‌

20 ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ಅತ್ತಾ ಜಿವನ್ ಕರುಕ್ ಲಾಗ್ಲಾ ತೊ ಮಿಯಾ ನ್ಹಯ್, ಕ್ರಿಸ್ತುಚ್ ಮಾಜ್ಯಾ ಭುತ್ತುರ್ ಜಿವನ್ ಕರುಕ್ ಲಾಗ್ಲಾ, ಶಾರಿರಿಕ್ ರಿತಿಚೆ ಜಿವನ್ ಮಿಯಾ ಕರುಕ್ ಲಾಗ್ಲಾ ತೆ ಮಿಯಾ ದೆವಾಚ್ಯಾ ಲೆಕಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾ ವೈನಾ ಜಿವನ್ ಕರುಕ್ ಲಾಗ್ಲಾ. ತೆನಿ ಮಾಜೊ ಪ್ರೆಮ್ ಕರ್‍ಲ್ಯಾನ್ ಅನಿ ಮಾಜ್ಯಾ ಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:20
65 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.


ನಾವು ಕ್ರಿಸ್ತನೊಂದಿಗೆ ಸತ್ತಿದ್ದರೆ, ಆತನೊಂದಿಗೆ ಜೀವಿಸುತ್ತೇವೆ ಎಂಬುದೂ ನಿಶ್ಚಯವಾಗಿದೆ.


ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು.


ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.


ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.


ನಾವು ತನ್ನೊಂದಿಗೆ ಜೀವಿಸಲೆಂದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎಂಬುದು ಮುಖ್ಯವಲ್ಲ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.


ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


“ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ಗೆಳೆಯರಿಗಾಗಿ ಸ್ವಂತ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ನಾವು ಪ್ರಪಂಚದಲ್ಲಿ ಜೀವಿಸುತ್ತಿದ್ದೇವೆ. ಆದರೆ ಪ್ರಪಂಚದವರು ಹೊಡೆದಾಡುವ ರೀತಿಯಲ್ಲಿ ನಾವು ಹೊಡೆದಾಡುವುದಿಲ್ಲ.


ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.


ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.


ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು.


ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ.


ತಂದೆಯು ಮಗನನ್ನು ಪ್ರೀತಿಸುತ್ತಾನೆ. ತಂದೆಯು ಮಗನಿಗೆ ಪ್ರತಿಯೊಂದರ ಮೇಲೆಯೂ ಅಧಿಕಾರವನ್ನು ಕೊಟ್ಟಿದ್ದಾನೆ.


ದೇವರು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿದ್ದನ್ನು ನಾವು ನೋಡಿದ್ದೇವೆ. ನಾವು ಈಗ ಜನರಿಗೆ ಹೇಳುತ್ತಿರುವುದು ಅದನ್ನೇ.


ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.


ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.


ನಾನು ನನ್ನ ಪ್ರಿಯನವಳೇ. ಅವನಿಗೆ ನನ್ನ ಮೇಲೇ ಆಸೆ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು.


ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.


ನಿಮ್ಮ ದೇಹವು ಪಾಪದ ದೆಸೆಯಿಂದಾಗಿ ಯಾವಾಗಲೂ ಸತ್ತದ್ದಾಗಿದೆ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ಆತ್ಮನು ನಿಮಗೆ ಜೀವವನ್ನು ಕೊಡುತ್ತಾನೆ. ಏಕೆಂದರೆ ಕ್ರಿಸ್ತನು ನಿಮ್ಮನ್ನು ನೀತಿವಂತರನ್ನಾಗಿ ಮಾಡಿದ್ದಾನೆ.


ಹೌದು, ನಾವೆಲ್ಲರೂ ಪ್ರಭುವಿಗೋಸ್ಕರವೇ ಜೀವಿಸುವವರಾಗಿದ್ದೇವೆ. ನಾವು ಜೀವಿಸುವುದಾಗಲಿ ಸಾಯುವುದಾಗಲಿ ನಮಗೋಸ್ಕರವಲ್ಲ.


ಆದರೆ ಪ್ರಭುವಿನೊಂದಿಗೆ ಸಂಬಂಧವನ್ನು ಹೊಂದಿರುವಂಥವನು ಆತ್ಮದಲ್ಲಿ ಪ್ರಭುವಿನೊಂದಿಗೆ ಒಂದಾಗಿರುತ್ತಾನೆ.


ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.


ಈ ವಿಷಯದಲ್ಲಿ ನಾನು ಹೆಮ್ಮೆಪಡುವುದನ್ನು ಅಖಾಯದಲ್ಲಿರುವ ಯಾರೂ ನಿಲ್ಲಿಸಲಾರರು. ಕ್ರಿಸ್ತನ ಸತ್ಯವು ನನ್ನೊಳಗಿರುವುದರಿಂದ ಇದನ್ನು ಹೇಳುತ್ತಿದ್ದೇನೆ.


ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದೆಂದರೆ ಲಾಭವೇ.


ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು