ಗಲಾತ್ಯದವರಿಗೆ 2:21 - ಪರಿಶುದ್ದ ಬೈಬಲ್21 ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ದೆವಾಚಿ ಕುರ್ಪಾ ನಕ್ಕೊ ಮನುಕ್ ಮಿಯಾ ತಯಾರ್ ನಾ, ಕಶ್ಯಾಕ್ ಮಟ್ಲ್ಯಾರ್ ಖಾಯ್ದ್ಯಾಚ್ಯಾ ವೈನಾ ಮಾನುಸ್ ನಿತಿವಂತ್ ಹೊತಾ ಹೊಲ್ಯಾರ್, ಕ್ರಿಸ್ತ್ ಮರಲ್ಲೆ ಕಾಯ್ಬಿ ಫಾಯ್ದ್ಯಾಚೆ ನ್ಹಯ್ ಮನುನ್ ಹೊಲೆ. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.