ಗಲಾತ್ಯದವರಿಗೆ 2:5 - ಪರಿಶುದ್ದ ಬೈಬಲ್5 ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಖರ್ಯಾ ಬರ್‍ಯಾ ಖಬ್ರಿಚೆ ಶಿಕಾಪ್ ತುಮ್ಚ್ಯಾ ಮದ್ದಿ ಘಟ್ಟ್ ರ್‍ಹಾಯ್ ಸಾರ್ಕೆ ಕರುಕ್ ಸಾಟ್ನಿ ಹ್ಯಾ ಮಾನ್ಸಾಕ್ನಿ ಅಮಿ ಎಕ್ ಉಲ್ಲೊಸೊ ಎಳ್ ಸೈತ್ ಸೊಡುಕ್ನಾವ್. ಅಧ್ಯಾಯವನ್ನು ನೋಡಿ |
ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.