ಗಲಾತ್ಯದವರಿಗೆ 2:7 - ಪರಿಶುದ್ದ ಬೈಬಲ್7 ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ಈ ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆಚ್ಯಾ ಬದ್ಲಾಕ್ ಕಶೆ ಸುನ್ನತ್ ಕರಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲೆ ಕಾಮ್ ಪೆದ್ರುಕ್ ಗಾವ್ಲಾ, ತಸೆಚ್ ಸುನ್ನತ್ ಕರಿನಸಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲಿ ಕಾಮ್ ಮಾಕಾ ಗಾವ್ಲಾ ಮನುನ್ ತೆನಿ ಸಗ್ಳ್ಯಾನಿ ಒಪ್ಪುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.