ಗಲಾತ್ಯದವರಿಗೆ 3:1 - ಪರಿಶುದ್ದ ಬೈಬಲ್1 ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅರೆ ಬುದ್ದ್ ನತ್ತ್ಯಾ ಗಾಲಾತ್‌ಕಾರಾನು!, ತುಮ್ಕಾ ಕೊನ್ ಪಸ್ವುಲೆ? ಕುರ್ಸಾರ್ ಮಾರಲ್ಲ್ಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ತುಮ್ಚ್ಯಾ ಡೊಳ್ಯಾಚ್ಯಾ ಇದ್ರಾಕ್ ಬರೆ ಕರುನ್ ಸೊಡ್ಸುನ್ ಥವಲ್ಲೆ ಹಾಯ್! ಅಧ್ಯಾಯವನ್ನು ನೋಡಿ |
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.