Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:17 - ಪರಿಶುದ್ದ ಬೈಬಲ್‌

17 ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ತಾತ್ಪರ್ಯವೇನಂದರೆ, ದೇವರು ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರಮೂವತ್ತು ವರುಷಗಳ ಮೇಲೆ ಬಂದ ಧರ್ಮಶಾಸ್ತ್ರವು ರದ್ದುಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಿಯಾ ಸಾಂಗ್ತಲೊ ಅರ್ಥ್ ಕಾಯ್ ಮಟ್ಲ್ಯಾರ್. ದೆವಾನ್ ಅಬ್ರಾಮಾಕ್ನಾ ಎಕ್ ಕರಾರ್ ಕರ್‍ಲ್ಯಾನ್ ಅನಿ ತ್ಯಾ ಗೊಸ್ಟಿ ಪರ್ಕಾರ್ ದಿವ್ಚೆ ಚಲುಚೆ ಮಟ್ಲ್ಯಾನ್, ಚಾರ್ಶೆ ತಿಸ್ ವರ್ಸಾಂಚ್ಯಾ ಮಾನಾ ದಿಲ್ಲೊ ತೊ ಕರಾರ್ ಮೊಡುಕ್ ಹೊಯ್ನಾ ಅನಿ ಕಾಯ್ಚ್ ನ್ಹಯ್ ಸಾರ್ಕೆ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:17
39 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.


ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.


ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?


ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.


ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು.


ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.


ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ಸರ್ವಶಕ್ತನಾದ ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು.


ಈ ಲೋಕವು ಸೃಷ್ಟಿಯಾಗುವುದಕ್ಕೆ ಮೊದಲೇ ಕ್ರಿಸ್ತನು ಆರಿಸಲ್ಪಟ್ಟನು. ಆದರೆ ಆತನು ನಿಮಗೋಸ್ಕರ ಈ ಅಂತ್ಯಕಾಲದಲ್ಲಿ ಪ್ರತ್ಯಕ್ಷನಾದನು.


ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


ಹಳೆಯ ನಿಯಮವು ದುರ್ಬಲವೂ ನಿಷ್ಪ್ರಯೋಜಕವೂ ಆಗಿದ್ದರಿಂದ ರದ್ದಾಯಿತು.


ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.


ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.


ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಸ್ವಲ್ಪ ಬಿತ್ತುವವನು ಕೇವಲ ಸ್ವಲ್ಪವನ್ನೇ ಕೊಯ್ಯುವನು, ಆದರೆ ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು.


ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.


ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು.


ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.


ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.


“ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.


ಮರಣದೊಂದಿಗೆ ನೀವು ಮಾಡಿದ ಒಪ್ಪಂದವು ಮುರಿಯಲ್ಪಡುವದು. ಪಾತಾಳದೊಂದಿಗೆ ನೀವು ಮಾಡಿದ ಒಪ್ಪಂದವು ನಿಮ್ಮ ಸಹಾಯಕ್ಕೆ ಬಾರದು. “ನಿಮ್ಮನ್ನು ಶಿಕ್ಷಿಸಲು ಒಬ್ಬನು ಬರುವನು. ಆತನು ನೀವು ಧೂಳೋ ಎಂಬಂತೆ ನಿಮ್ಮ ಮೇಲೆ ತುಳಿದಾಡುವನು.


ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?


ಆದರೆ ಗಂಡನು ಅದನ್ನು ಕೇಳಿದ ದಿನವೇ ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ಯೆಹೋವನು ಅವಳನ್ನು ಕ್ಷಮಿಸುವನು.


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, ‘ಇಸಾಕ’ ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ.


ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು. ಆತನು ಇಸಾಕನಿಗೆ ವಾಗ್ದಾನ ಮಾಡಿದನು.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು