ಗಲಾತ್ಯದವರಿಗೆ 3:2 - ಪರಿಶುದ್ದ ಬೈಬಲ್2 ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಾಕಾ ತುಮಿ ಎಕ್ ಸಾಂಗಾ: ತುಮಿ ದೆವಾಚೊ ಆತ್ಮೊ ಖಾಯ್ದೊ ಕಾಯ್ ಸಾಂಗ್ತಾ ತೆ ಕರುನ್ ಜೊಡುನ್ ಘೆಟ್ಲ್ಯಾಶಿ, ಕಾಯ್ ಬರಿ ಖಬರ್ ಆಯ್ಕುನ್ ಅನಿ ತೆಚ್ಯಾ ವರ್‍ತಿ ವಿಶ್ವಾಸ್ ಕರುನ್ ಜೊಡುನ್ ಘೆಟ್ಲ್ಯಾಶಿ? ಅಧ್ಯಾಯವನ್ನು ನೋಡಿ |
ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.