ಗಲಾತ್ಯದವರಿಗೆ 3:23 - ಪರಿಶುದ್ದ ಬೈಬಲ್23 ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕ್ರಿಸ್ತನಂಬಿಕೆಯ ಕಾಲ ಬರುವದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವದಕ್ಕಾಗಿ ಧರ್ಮಶಾಸ್ತ್ರದ ಕೈಕೆಳಗೆ ಕಾವಲಲ್ಲಿ ಮುಚ್ಚಲ್ಪಟ್ಟಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ವಿಶ್ವಾಸಾಚೊ ಎಳ್ ಎವ್ಡ್ಯಾ ಅದ್ದಿ ಖಾಯ್ದ್ಯಾನ್ ಅಮ್ಕಾ ಯೆತಲೊ ವಿಶ್ವಾಸ್ ದಿಸಿ ಪಾತರ್ ಬಂದಿ ಕರುನ್ ಥವಲ್ಲ್ಯಾನ್ ನ್ಹಯ್. ಅಧ್ಯಾಯವನ್ನು ನೋಡಿ |
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.