Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:3 - ಪರಿಶುದ್ದ ಬೈಬಲ್‌

3 ಕ್ರಿಸ್ತನಲ್ಲಿಯ ನಿಮ್ಮ ಜೀವಿತವನ್ನು ಪವಿತ್ರಾತ್ಮನೊಂದಿಗೆ ಆರಂಭಿಸಿದಿರಿ. ಈಗ ಅದನ್ನು ನಿಮ್ಮ ಸ್ವಂತ ಶಕ್ತಿಯೊಂದಿಗೆ ಮುಂದುವರಿಸಲು ಪ್ರಯತ್ನಿಸುತ್ತೀರೋ? ಅದು ಬುದ್ಧಿಹೀನತೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ಪವಿತ್ರಾತ್ಮ ಸಂಬಂಧವಾದ ಆಧ್ಯಾತ್ಮಿಕ ಜೀವನವನ್ನು ಪ್ರಾರಂಭಿಸಿಯೂ ಈಗ ಅದನ್ನು ಕೇವಲ ದೇಹಸಂಬಂಧವಾದ ವಿಧಿಯಿಂದ ಪೂರೈಸಬೇಕೆಂದಿದ್ದೀರೋ? ನೀವು ಅಷ್ಟು ಮತಿಗೆಟ್ಟವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಬಹಿರಾಚಾರಗಳಿಂದ ಸಿದ್ಧಿಗೆ ಬರಬೇಕೆಂದಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಯೆವ್ಡೆ ಪಿಶೆ ಕಶೆ ಹೊಲ್ಯಾಸಿ? ತುಮಿ ದೆವಾಚ್ಯಾ ಆತ್ಮ್ಯಾಚ್ಯಾ ವೈನಾ ಸುರು ಕರ್ಲ್ಯಾಸಿ, ಅತ್ತಾ ತುಮಿ ತುಮ್ಚ್ಯಾ ಇಚ್ಚ್ಯಾ ಸಾರ್ಕೆ ಅಂತ್ ಕರುಕ್ ಬಗುಲ್ಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:3
9 ತಿಳಿವುಗಳ ಹೋಲಿಕೆ  

ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.


“ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”


ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.


ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು