ಗಲಾತ್ಯದವರಿಗೆ 3:5 - ಪರಿಶುದ್ದ ಬೈಬಲ್5 ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ದೆವಾನ್ ತುಮ್ಕಾ ಆತ್ಮೊ ದಿಲ್ಲೆ ಅನಿ ಆಜಾಪಾಚಿ ಕಾಮಾ ಕರಲ್ಲೆ ತುಮಿ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲುಲ್ಯಾಸಿ ಮನುನ್ ಕಾಯ್, ತುಮಿ ಬರಿ ಖಬರ್ ಆಯ್ಕುನ್ ತೆಚ್ಯಾ ವೈರ್ ವಿಶ್ವಾಸ್ ಕರ್ಲ್ಯಾಸಿ ಮನುನ್? ಅಧ್ಯಾಯವನ್ನು ನೋಡಿ |