ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.
ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ.
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.
ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.