ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.
ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.
ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.
ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.
ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು.