Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:17 - ಪರಿಶುದ್ದ ಬೈಬಲ್‌

17 ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ನನ್ನ ವಿರೋಧಿಗಳು ನಿಮ್ಮನ್ನು ಮೆಚ್ಚಿಸಲು ತುಂಬ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಅವರ ಉದ್ದೇಶ ಒಳ್ಳೆಯದಲ್ಲ. ನೀವು ಸಹ ಅವರನ್ನು ಅಷ್ಟೇ ಆಸಕ್ತಿಯಿಂದ ಮೆಚ್ಚಿಸಬೇಕೆಂಬುದೇ ಅವರ ಉದ್ದೇಶ. ಆದ್ದರಿಂದಲೇ ನಿಮ್ಮನ್ನು ನನ್ನಿಂದ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಂಥವರಾಗಿರದೆ ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗಲಿಸುವದಕ್ಕೆ ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನಿಮ್ಮನ್ನು ಆಕರ್ಷಿಸಲು ಆಸಕ್ತರಾಗಿದ್ದಾರೆ. ಆದರೆ ಒಳ್ಳೆಯ ಅಭಿಪ್ರಾಯದಿಂದ ಅಲ್ಲ. ನೀವು ಅವರ ವಿಷಯದಲ್ಲಿ ಆಸಕ್ತರಾಗಬೇಕೆಂದು ಅವರು ನಿಮ್ಮನ್ನು ನಮ್ಮಿಂದ ಪ್ರತ್ಯೇಕಿಸುವುದಕ್ಕೆ ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹೆಚ್ಯಾಸಾಟ್ನಿ ಜೆ ಕೊನ್ ತುಮ್ಚ್ಯಾ ವರ್ತಿ ಉಮ್ಮೆದಿನ್ ರ್‍ಹಾತ್ಯಾತ್, ತಸೆಚ್ ತುಮಿಬಿ ತೆಂಚ್ಯಾ ವರ್‍ತಿ ಉಮ್ಮೆದಿನ್ ರ್‍ಹವ್ಚೆ ಮನುನ್ ತೆನಿ ಆಶಾ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:17
14 ತಿಳಿವುಗಳ ಹೋಲಿಕೆ  

ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.


ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.


ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.


ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.


ನಿಮ್ಮಲ್ಲಿ ಕೆಲವರು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ನಾನು ನಿಮ್ಮ ಬಳಿಗೆ ಮತ್ತೆ ಬರುವುದಿಲ್ಲವೆಂದು ಯೋಚಿಸಿ, ನೀವು ಜಂಬಪಡುತ್ತಿದ್ದೀರಿ.


ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ?


ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು