ಗಲಾತ್ಯದವರಿಗೆ 4:6 - ಪರಿಶುದ್ದ ಬೈಬಲ್6 ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮಿ ತೆಚಿ ಲೆಕಾ ಅನಿ ಲೆಕಿಯಾ ಮನುನ್ ದಾಕ್ವುಸಾಟ್ನಿ ದೆವಾನ್ ಅಪ್ನಾಚ್ಯಾ ಲೆಕಾಚೊ ಆತ್ಮೊ ಅಮ್ಚ್ಯಾ ಮನಾತ್ ಧಾಡ್ಲ್ಯಾನ್ ತೊ ಆತ್ಮೊ “ಅಬ್ಬಾ! ಬಾಬಾ!” ಮನುನ್ ಬಲ್ವುತಾ. ಅಧ್ಯಾಯವನ್ನು ನೋಡಿ |
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.