ಗಲಾತ್ಯದವರಿಗೆ 4:8 - ಪರಿಶುದ್ದ ಬೈಬಲ್8 ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮುಂಚೆ ನೀವು ದೇವರನ್ನು ಅರಿಯದವರಾಗಿದ್ದಾಗ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ನೀವು ಗುಲಾಮರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಫಾಟಿ ತುಮ್ಕಾ ದೆವಾಚಿ ವಳಕ್ ನತ್ತಿ, ಅನಿ ತುಮಿ ಸ್ವಭಾವಾನ್ ದೆವ್ ನ್ಹಯ್ ಹೊತ್ತ್ಯಾಕ್ನಿ ಗುಲಾಮಾ ಹೊವ್ನ್ ಹೊತ್ತ್ಯಾಶಿ. ಅಧ್ಯಾಯವನ್ನು ನೋಡಿ |
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.