ಗಲಾತ್ಯದವರಿಗೆ 5:13 - ಪರಿಶುದ್ದ ಬೈಬಲ್13 ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅನಿ ಮಾಜ್ಯಾ ಭೆನಿಯಾನು ಭಾವಾನು, ದೆವಾನ್ ತುಮ್ಕಾ ಸ್ವತಂತ್ರ್ ರ್‍ಹಾವ್ಚೆ ಮನುನ್ ಬಲ್ವಲ್ಲೆ ಹಾಯ್, ಖರೆ ಹೆ ಸ್ವತಂತ್ರ್ ತುಮ್ಚ್ಯಾ ಆಂಗಾಚ್ಯಾ ಆಶಾತ್ ಪಡುಕ್ ಎಕ್ ಕಾರನ್ ಹೊವ್ಕ್ ದಿವ್ನಕಾಸಿ. ಹೆಚ್ಯಾ ಬದ್ಲಾಕ್ ಪ್ರೆಮಾನ್ ಎಕಾಮೆಕಾಚಿ ಸೆವಾ ಕರಾ. ಅಧ್ಯಾಯವನ್ನು ನೋಡಿ |