ಗಲಾತ್ಯದವರಿಗೆ 5:7 - ಪರಿಶುದ್ದ ಬೈಬಲ್7 ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಚೆನ್ನಾಗಿ ಓಡುತ್ತಾ ಇದ್ದಿರಿ; ನೀವು ಸತ್ಯವನ್ನು ಅನುವರ್ತಿಸದಂತೆ ಯಾರು ನಿಮ್ಮನ್ನು ತಡೆದರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತುಮಿ ಬರೆ ಕರುನ್ ಚಲುಲ್ಯಾಸಿ! ತುಮಿ ಖರ್‍ಯಾಕ್ ಖಾಯ್ಲ್ ಹೊವ್ನ್ ಚಲಿನಸಿ ಸಾರ್ಕೆ ಕರಲ್ಲೊ ಕೊನ್? ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.