Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:1 - ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚ್ಯಾ ಮದ್ದಿ ಕೊನ್‍ ತರ್ಬಿ ಎಕ್ಲೊ ಕಸ್ಲ್ಯಾಬಿ ಚುಕೆತ್ ಪಡಲ್ಲೊ ಗಾವ್ಲ್ಯಾರ್, ಆತ್ಮಿಕ್ ರಿತಿಚೆ ತುಮಿ ಜಾವ್ನ್ ತೆಂಕಾ ಸಮಾ ಕರುಚೆ. ಖರೆ ತುಮಿ ಶಾಂತ್ಪಾನಾನ್ ನಾತರ್ ಸಮಾಧಾನಾನ್ ತೆ ಕರುಚೆ, ಅನಿ ತುಮ್ಚ್ಯಾ ವರ್‍ತಿ ಎಕ್ ನದರ್ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್ ತುಮಿ ಪರಿಕ್ಷಾತ್ ಪಡ್ತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:1
41 ತಿಳಿವುಗಳ ಹೋಲಿಕೆ  

ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.


ಆದರೆ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿ ಹೇಳಿರಿ.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ನೀವು ಯೋಗ್ಯವಾದ ಮಾರ್ಗದಲ್ಲಿ ಜೀವಿಸಿದರೆ ರಕ್ಷಣೆ ಹೊಂದುವಿರಿ ಮತ್ತು ನಿಮ್ಮನ್ನು ನಾಶಗೊಳಿಸಲು ನಿಮ್ಮ ಬಲಹೀನತೆಗಳಿಗೆ ಸಾಧ್ಯವಾಗುವುದಿಲ್ಲ.


ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.


“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”


ಆದ್ದರಿಂದ ತಾನು ದೃಢವಾಗಿ ನಿಂತಿದ್ದೇನೆ ಎಂದು ಯೋಚಿಸುವ ವ್ಯಕ್ತಿಯು ಬೀಳದಂತೆ ಎಚ್ಚರಿಕೆಯಿಂದಿರಬೇಕು.


ನೀವು ಯಾವುದನ್ನು ಇಷ್ಟಪಡುತ್ತೀರಿ? ನಾನು ಬೆತ್ತವನ್ನು ತೆಗೆದುಕೊಂಡು ಬರಬೇಕೇ? ಅಥವಾ ಪ್ರೀತಿ ಮತ್ತು ಸೌಮ್ಯಭಾವಗಳಿಂದ ಕೂಡಿದವನಾಗಿ ಬರಬೇಕೆ?


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ಯಾವನಾದರೂ ತಾನು ಪ್ರವಾದಿಯೆಂದು ಅಥವಾ ತನ್ನಲ್ಲಿ ಆತ್ಮಿಕ ವರವಿದೆಯೆಂದು ಯೋಚಿಸುವುದಾದರೆ, ಇದು ಪ್ರಭುವಿನ ಆಜ್ಞೆಯೆಂದು ಅವನು ಅರ್ಥಮಾಡಿಕೊಳ್ಳಬೇಕು.


ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.


ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.


ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.


ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.


ಸಾಧುತ್ವ, ಇಂದ್ರಿಯ ನಿಗ್ರಹ ಇಂಥವುಗಳೇ. ಇವುಗಳನ್ನು ತಪ್ಪೆಂದು ಯಾವ ಧರ್ಮಶಾಸ್ತ್ರವೂ ಹೇಳುವುದಿಲ್ಲ.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ಸಹೋದರ ಸಹೋದರಿಯರೇ, ನಾನು ಆತ್ಮಿಕ ಜನರೊಂದಿಗೆ ಮಾತಾಡುವಂತೆ ಮೊದಲು ನಿಮ್ಮೊಂದಿಗೆ ಮಾತಾಡಲಾಗಲಿಲ್ಲ. ಪ್ರಾಪಂಚಿಕರೂ ಕ್ರಿಸ್ತನಲ್ಲಿ ಎಳೆಕೂಸುಗಳೂ ಆಗಿರುವಂಥವರೊಂದಿಗೆ ಮಾತಾಡುವಂತೆ ನಾನು ನಿಮ್ಮೊಂದಿಗೆ ಮಾತಾಡಬೇಕಾಯಿತು.


“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಇತ್ತ ಪೇತ್ರನು ಅಂಗಳದಲ್ಲಿ ಕುಳಿತಿದ್ದನು. ಸೇವಕಿಯೊಬ್ಬಳು ಪೇತ್ರನ ಬಳಿಗೆ ಬಂದು, “ನೀನು ಸಹ ಗಲಿಲಾಯದ ಯೇಸುವಿನೊಂದಿಗಿದ್ದವನು” ಎಂದು ಹೇಳಿದಳು.


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ನನ್ನ ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲೆಂದು ಪ್ರಾರ್ಥಿಸುತ್ತೇನೆ. ಆಮೆನ್.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ಆದ್ದರಿಂದ ನೀವು ಅವನನ್ನು ಪ್ರೀತಿಸುತ್ತೀರೆಂಬುದನ್ನು ಅವನಿಗೆ ತೋರಿಸಿಕೊಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು