Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:18 - ಪರಿಶುದ್ದ ಬೈಬಲ್‌

18 ನನ್ನ ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲೆಂದು ಪ್ರಾರ್ಥಿಸುತ್ತೇನೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೊಡನೆ ಇರಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಜ್ಯಾ ಭಾವಾನು ಅನಿ ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚಿ ಕುರ್ಪಾ ತುಮ್ಚ್ಯಾ ಆತ್ಮ್ಯಾಚ್ಯಾ ವಾಂಗ್ಡಾ ರ್‍ಹಾಂವ್ದಿತ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:18
12 ತಿಳಿವುಗಳ ಹೋಲಿಕೆ  

ಪ್ರಭುವು ನಿನ್ನ ಆತ್ಮದ ಸಂಗಡ ಇರಲಿ. ಆತನ ಕೃಪೆಯು ನಿನ್ನೊಂದಿಗಿರಲಿ.


ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ.


ಪ್ರಭು ಯೇಸುವಿನ ಕೃಪೆಯು ಎಲ್ಲಾ ಜನರೊಂದಿಗಿರಲಿ.


ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.


ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.


ಸಹೋದರ ಸಹೋದರಿಯರೇ, ನಾನೂ ನಿಮ್ಮಂತಿದ್ದೆನು. ಆದ್ದರಿಂದ ದಯವಿಟ್ಟು ನನ್ನಂತೆ ಆಗಿರಿ.


ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು