ಗಲಾತ್ಯದವರಿಗೆ 6:8 - ಪರಿಶುದ್ದ ಬೈಬಲ್8 ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತೆನಿ ಅಪ್ನಾಚ್ಯಾ ಮಾನ್ಸಾಚ್ಯಾ ಆಶೆನ್ ಪೆರ್‍ಲ್ಯಾರ್; ತ್ಯಾತುರ್ನಾ ತೆನಿ ಗೊಳಾ ಕರ್‍ತಲೆ ಪಿಕ್ಕ್ ಮರಾನ್. ತೆನಿ ಪವಿತ್ರ್ ಆತ್ಮ್ಯಾಚ್ಯಾ ಶೆತಾತ್ ಪೆರಲ್ಲೆ ರ್‍ಹಾಲ್ಯಾರ್, ಪವಿತ್ರ್ ಆತ್ಮ್ಯಾಕ್ನಾ ತೆನಿ ಗೊಳಾ ಕರ್‍ತಲೆ ಪಿಕ್ಕ್ ಕನ್ನಾಬಿ ಮರಾನ್ ನಸಲ್ಲೆ ಜಿವನ್. ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.