Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:1 - ಪರಿಶುದ್ದ ಬೈಬಲ್‌

1 ಚೆಫನ್ಯನಿಗೆ ಯೆಹೋವನು ಕೊಟ್ಟ ಸಂದೇಶ. ಆಮೋನನ ಮಗನಾದ ಯೋಷೀಯನು ಯೆಹೂದ ಪ್ರಾಂತ್ಯದ ಅರಸನಾಗಿದ್ದಾಗ ಈ ಸಂದೇಶವು ಅವನಿಗೆ ದೊರಕಿತು. ಚೆಫನ್ಯನು ಕೂಷನ ಮಗನು; ಕೂಷನು ಗೆದಲ್ಯನ ಮಗನು; ಗೆದಲ್ಯನು ಅಮರ್ಯನ ಮಗನು; ಅಮರ್ಯನು ಹಿಜ್ಕೀಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:1
12 ತಿಳಿವುಗಳ ಹೋಲಿಕೆ  

ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು.


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.


ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.


ಪವಿತ್ರ ಗ್ರಂಥವನ್ನು ದೇವರು ದಯಪಾಲಿಸಿದನು. ಉಪದೇಶವನ್ನು ಮಾಡುವುದಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಅದು ಉಪಯುಕ್ತವಾಗಿದೆ.


ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು “ಉಜ್ಜನ ವನ”ದಲ್ಲಿ ಸಮಾಧಿಮಾಡಿದರು. ಈ ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು.


ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.


ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.


ಆಮೋನನನ್ನು ಉಜ್ಜನವನದಲ್ಲಿ ಅವನ ಸ್ಮಶಾನದಲ್ಲಿ ಸಮಾಧಿಮಾಡಿದರು. ಆಮೋನನ ಮಗನಾದ ಯೋಷೀಯನು ಹೊಸ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು