Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:10 - ಪರಿಶುದ್ದ ಬೈಬಲ್‌

10 ಯೆಹೋವನು ಇನ್ನೂ ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದೇ ದಿನದಲ್ಲಿ ಮೀನುಬಾಗಿಲಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿಂದ ಧಡಮ್ ಎನ್ನುವ ಶಬ್ದ, ಅಂತು ದೊಡ್ಡ ಗದ್ದಲವಾಗುವದು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆ ದಿನದಲ್ಲಿ, ಮೀನಿನ ಬಾಗಿಲಿನಿಂದ ಕೂಗಿನ ಶಬ್ದವೂ ಹೊಸ ಮನೆಯಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ಮುರಿಯುವ ಬಲವಾದ ಶಬ್ದವೂ ಕೇಳಿಬರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:10
18 ತಿಳಿವುಗಳ ಹೋಲಿಕೆ  

ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;


ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”


ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣಿಗಳನ್ನಿಟ್ಟು ಭದ್ರಪಡಿಸಿದರು.


ಯೆಹೋವನು ತನ್ನ ಕೋಪವನ್ನು ಆ ದಿವಸದಲ್ಲಿ ತೋರಿಸುವನು. ಆ ದಿವಸಗಳಲ್ಲಿ ಮಹಾ ಸಂಕಟಗಳಿರುವವು. ಅವು ನಾಶನದ ದಿವಸಗಳಾಗಿರುವವು. ಆ ದಿವಸವು ಕತ್ತಲು, ಕಾರ್ಮುಗಿಲು ಕವಿದ ಬಿರುಗಾಳಿಯ ದಿವಸವಾಗಿರುವುದು.


ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.


ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.


ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.


ಜೆರುಸಲೇಮಿನಲ್ಲಿರುವ ಮೋರೀಯಾ ಬೆಟ್ಟದ ಮೇಲೆ ಸೊಲೊಮೋನನು ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದನು. ಅದೇ ಸ್ಥಳದಲ್ಲಿ ಸೊಲೊಮೋನನ ತಂದೆಯಾದ ದಾವೀದನಿಗೆ ಯೆಹೋವನು ದರ್ಶನ ಕೊಟ್ಟಿದ್ದನು. ಅದು ಯೆಬೂಸಿಯನಾದ ಒರ್ನಾನನ ಕಣವಾಗಿತ್ತು. ಆಲಯವನ್ನು ಕಟ್ಟಲು ದಾವೀದನು ಆ ಸ್ಥಳವನ್ನು ತಯಾರು ಮಾಡಿದ್ದನು.


ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಆದರೆ ದಾವೀದನು ಚೀಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಈ ಕೋಟೆಗೆ ದಾವೀದ ನಗರವೆಂದು ಹೆಸರಾಯಿತು.)


ಹಿಲ್ಕೀಯನೂ ಅರಸನ ಸೇವಕರೂ ಪ್ರವಾದಿನಿಯಾಗಿದ್ದ ಹುಲ್ದಳ ಬಳಿಗೆ ಹೋದರು. ಆಕೆ ತೊಕ್ಹತನ ಮಗನಾದ ಶಲ್ಲೂಮನ ಹೆಂಡತಿಯಾಗಿದ್ದಳು. ತೊಕ್ಹತನು ಹಸ್ರನ ಮಗ. ಇವನು ಅರಸನ ಬಟ್ಟೆಬರೆಗಳ ಮುಖ್ಯಸ್ತನಾಗಿದ್ದನು. ಹುಲ್ದಳು ಜೆರುಸಲೇಮಿನ ಹೊಸ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಳು. ಅರಸನು ಹೇಳಿದ್ದನ್ನೆಲ್ಲಾ ಸೇವಕರು ಆಕೆಗೆ ತಿಳಿಸಿದರು.


ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.


ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು