Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:12 - ಪರಿಶುದ್ದ ಬೈಬಲ್‌

12 “ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:12
19 ತಿಳಿವುಗಳ ಹೋಲಿಕೆ  

ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.


“ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”


ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಆ ಜನರು, “ಆತನು ಮತ್ತೆ ಬರುವುದಾಗಿ ವಾಗ್ದಾನ ಮಾಡಿದ್ದನು. ಆತನು ಎಲ್ಲಿದ್ದಾನೆ? ನಮ್ಮ ಪಿತೃಗಳು ಸತ್ತುಹೋದರು. ಆದರೆ ಈ ಲೋಕವು ಆದಿಯಿಂದಲೂ ಇದ್ದ ರೀತಿಯಲ್ಲಿಯೇ ಇದೆ” ಎಂದು ಹೇಳುವರು.


ಆದರೆ ವೈರಿಯು ಏಸಾವಿನ ಗುಪ್ತನಿಧಿಗಾಗಿ ಹುಡುಕುವರು; ಅವರು ಎಲ್ಲವನ್ನು ಕಂಡುಹಿಡಿಯುವರು.


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.


ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.


ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು