Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:2 - ಪರಿಶುದ್ದ ಬೈಬಲ್‌

2 ಯೆಹೋವನು ಹೇಳುವುದೇನೆಂದರೆ, “ಭೂಲೋಕದಲ್ಲಿರುವದೆಲ್ಲವನ್ನು ನಾನು ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಇಂತೆಂದರು - “ನಾನು ಭೂಮಂಡಲದ ಮೇಲೆ ಏನೂ ಇಲ್ಲದಂತೆ ಸಮಸ್ತವನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಇಂತೆನ್ನುತ್ತಾನೆ - ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:2
13 ತಿಳಿವುಗಳ ಹೋಲಿಕೆ  

ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು.


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’”


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು.


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು