Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:3 - ಪರಿಶುದ್ದ ಬೈಬಲ್‌

3 ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:3
22 ತಿಳಿವುಗಳ ಹೋಲಿಕೆ  

ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.


ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


ನಾನು ನಿನಗೆ ಹೇಳುವುದೇನೆಂದರೆ, ‘ಪ್ರಭುವಿನ ಹೆಸರಿನಲ್ಲಿ ಬರುವಾತನನ್ನು ದೇವರು ಆಶೀರ್ವದಿಸಲಿ’ ಎಂದು ನೀನು ಹೇಳುವ ತನಕ ನನ್ನನ್ನು ನೋಡುವುದೇ ಇಲ್ಲ.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದ್ದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ಜನರು ಬಹುದೂರ ಹೋಗುವಂತೆ ಯೆಹೋವನು ಮಾಡುವನು. ದೇಶದೊಳಗೆ ನಿರ್ಜನವಾದ ಸ್ಥಳಗಳು ಬೇಕಾದಷ್ಟು ಇರುವವು.


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು