ಚೆಫನ್ಯ 2:11 - ಪರಿಶುದ್ದ ಬೈಬಲ್11 ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.