14 ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.
“ಯೆಹೋಯಾಕೀಮನು, ‘ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ’ ಎಂದು ಹೇಳುತ್ತಾನೆ. ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ. ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ. ಅದಕ್ಕೆ ಕೆಂಪು ಬಣ್ಣವನ್ನು ಬಳಿಯುತ್ತಾನೆ.
ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”
ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.