ಚೆಫನ್ಯ 2:7 - ಪರಿಶುದ್ದ ಬೈಬಲ್7 ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು. ಅಧ್ಯಾಯವನ್ನು ನೋಡಿ |
ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.