9 ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
9 ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
9 ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”
9 ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.
ದೇವರು ಸೊದೋಮ್ ಗೊಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.”
ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.
ಮೇಲಕ್ಕೆ ನೋಡು! ನಿನ್ನ ಸುತ್ತಲೂ ನೋಡು! ನಿನ್ನ ಮಕ್ಕಳೆಲ್ಲಾ ಒಟ್ಟಾಗಿ ಸೇರಿ ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿನ್ನ ಮಕ್ಕಳು ನೀನು ಕೊರಳಲ್ಲಿ ಧರಿಸುವ ಹಾರದಂತಿರುವರು. ಮದುಮಗಳು ಧರಿಸುವ ಕಂಠಹಾರದಂತೆ ನಿನ್ನ ಮಕ್ಕಳಿರುವರು.
ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.”
ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”
ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.
ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.
ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.
ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.
ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?”
“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”
ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು.