ಚೆಫನ್ಯ 3:10 - ಪರಿಶುದ್ದ ಬೈಬಲ್10 ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.