ಚೆಫನ್ಯ 3:11 - ಪರಿಶುದ್ದ ಬೈಬಲ್11 “ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ. ಅಧ್ಯಾಯವನ್ನು ನೋಡಿ |
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.