Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:14 - ಪರಿಶುದ್ದ ಬೈಬಲ್‌

14 ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಚೀಯೋನ್ ನಗರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಆರ್ಭಟಿಸು! ಯೆರೂಸಲೇಮ್ ಪುರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:14
34 ತಿಳಿವುಗಳ ಹೋಲಿಕೆ  

ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಹಿಂಡುಗಳ ಗೋಪುರವೇ, ನಿನ್ನ ಸಮಯವು ಬರುವದು. ಚೀಯೋನಿನ ಒಫೆಲ್ ಗುಡ್ಡವೇ, ನಿನಗೆ ತಿರುಗಿ ಅಧಿಕಾರ ದೊರಕುವುದು. ಹೌದು, ಮೊದಲಿನಂತೆಯೇ ಜೆರುಸಲೇಮಿನಲ್ಲೇ ರಾಜ್ಯವಿರುವುದು.


ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದ್ದರಿಂದ ನೀನು ಬಹಳವಾಗಿ ಸಂತೋಷಿಸು. ಯೆಹೋವನು ಹೇಳುವುದೇನೆಂದರೆ, “ಗಂಡ ಬಿಟ್ಟಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.”


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.


ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


ಚೀಯೋನೇ, ಕೇಳಿ ಸಂತೋಷಪಡು! ಯೆಹೂದದ ಪಟ್ಟಣಗಳೇ, ಆನಂದಿಸಿರಿ. ಯಾಕೆಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ.


“ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.


ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.


ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.


ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು