Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:17 - ಪರಿಶುದ್ದ ಬೈಬಲ್‌

17 ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:17
30 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!


ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.


ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’”


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ನನಗಿರುವ ಆನಂದವನ್ನು ನೀವೂ ಹೊಂದಿಕೊಳ್ಳಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನು ಹೇಳಿದ್ದೇನೆ. ನಿಮ್ಮ ಆನಂದವು ಪರಿಪೂರ್ಣವಾದ ಆನಂದವಾಗಿರಬೇಕೆಂದು ನಾನು ಬಯಸುತ್ತೇನೆ.


“ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು.


ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


ದೇಶವೇ, ಭಯಪಡದಿರು. ಯೆಹೋವನು ಮಹತ್ಕಾರ್ಯವನ್ನು ಮಾಡಲಿರುವದರಿಂದ ಸಂತೋಷದಿಂದ ಆನಂದಿಸು.


“ಒಬ್ಬ ಗುಲಾಮನು ತನ್ನ ಧಣಿಯ ಬಳಿಯಿಂದ ನಿಮ್ಮ ಬಳಿಗೆ ಓಡಿ ಬಂದರೆ ನೀವು ಅವನ ಧಣಿಗೆ ಅವನನ್ನು ಒಪ್ಪಿಸಬಾರದು.


ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು