ಚೆಫನ್ಯ 3:18 - ಪರಿಶುದ್ದ ಬೈಬಲ್18 ನಿನ್ನ ನಾಚಿಕೆಯನ್ನು ತೆಗೆದುಬಿಡುವನು. ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಡೆದುಬಿಡುವನು ಸರ್ವವಿನಾಶವನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಯ್ಯೋ, ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕೂತಿದೆ ಎಂದು ಮಹೋತ್ಸವಕ್ಕೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು ನಿಮ್ಮಿಂದ ನಾನು ತೆಗೆದುಬಿಡುವೆನು. ಅವು ನಿನಗೆ ಭಾರವಾಗಿಯೂ ನಿಂದೆಯಾಗಿಯೂ ಇದ್ದವು. ಅಧ್ಯಾಯವನ್ನು ನೋಡಿ |
ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.